ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಸಾಲೆತ್ತೂರು ಸಮೀಪದ ಕಟ್ಟೆತ್ತಿಲ್ಲ ಜಲಲೂದ್ಧಿನ್, ಒಕ್ಕೆತ್ತೂರು ಪೈಝಲ್ ಎಂಬವರು ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಕರ್ನಾಟಕ ಭಾಗಗಳಿಗೆ ಮಾದಕ ವಸ್ತುಗಳನ್ನು ಸಾಗಾಟ ಮಾಡುವ ಇವರು ಅಂತರಾಜ್ಯ ಡ್ರಗ್ ಪೆಡ್ಲರ್ಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಸಬ್ ಇನ್ಸ್ಪೆಕ್ಟರ್ ಸಂದೀಪ್, ಮಂಜುನಾಥ್, ಸಿಬ್ಬಂದಿಗಳಾದ ಹೇಮಾರಾಜ್, ಅಶೋಕ್, ವಿಠಲ್ ರವರು ಪಾಲ್ಗೊಂಡಿದ್ದರು.
Follow us on Social media