ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಅವರು ಈ ತೀರ್ಮಾನ ಪ್ರಕಟಿಸಿದರು.