ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಮುಸ್ಲಿಂ ಯುವಕ ಮತ್ತು ಹಿಂದೂ ವಿದ್ಯಾರ್ಥಿನಿ ಮೊದಲು ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದ ಬಳಿ ಕಂಡು ಬಂದಿದ್ದು, ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನನ್ನು ಥಳಿಸಿದೆ ಎನ್ನಲಾಗಿದೆ.
ಹಲ್ಲೆಗೊಳಗಾದ ಯುವಕ ಸುಳ್ಯದ ಕಲ್ಲುಗುಂಡಿಯ ನಿವಾಸಿ ಎಂದು ತಿಳಿದು ಬಂದಿದೆ.
ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.