ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.
ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ಮತ್ತೊಮ್ಮೆ ಗುರುವಾರ ಅನುಭವವಾಗಿದೆ.
ಏಕಾಏಕಿ ಉಂಟಾದ ಶಬ್ದ ಗಾಢ ನಿದ್ರೆಯಲ್ಲಿದ್ದ ಜನರನ್ನು ಬಡಿದೆಬ್ಬಿಸಿದೆ. ಮೊದಲಿಗೆ ಭಾರಿ ಶಬ್ದ ಕೇಳಿ ಬಂದಿದ್ದು, ನಂತರ ಒಮ್ಮೆಲೆ ಸುಮಾರು 2 ಸೆಕೆಂಡ್ಗಳ ಕಾಲ ಭೂಮಿ ನಡುಗಿದ ಅನುಭವ ಆಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ.
ಕಳೆದ ಒಂದು ವಾರದಲ್ಲಿ ಕೊಡಗು ಹಾಗೂ ಸುಳ್ಯ ತಾಲೂಕಿನ ವಿವಿಧ ಕಡೆ ನಾಲ್ಕನೇ ಬಾರಿಗೆ ಭೂಮಿ ಕಂಪಿಸಿದ ಅನುಭವವಾಗುತ್ತಿದೆ.
ಈ ಶಬ್ದದಿಂದ ಕೆಲವರು ಹೆದರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಜನರ ಆತಂಕ ಇನ್ನೂ ಕೂಡಾ ಮುಂದುವರೆದಿದೆ.
Follow us on Social media