ಸುಳ್ಯ: ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಆತನ ಪತ್ನಿ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಲಾಡ್ಜ್ ವೊಂದರಲ್ಲಿ ನಡೆದಿದೆ.
ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್ ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.
ಇನ್ನು ಇವರು ಬರುವುದನ್ನು ಕಾಯುತ್ತಿದ್ದ ಆತನ ಹೆಂಡತಿ ರಸ್ತೆಯಲ್ಲಿ ಗಂಡನನ್ನು ಮತ್ತು ಆ ಯುವತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇವರ ಬೊಬ್ಬೆ ಕೇಳಿ ನೂರಾರು ಜನ ಸ್ಥಳದಲ್ಲಿ ಜಮಾಯಿಸಿದರು.ಬಳಿಕ ಕೋಪಗೊಂಡಿದ್ದ ಪತ್ನಿಯನ್ನು ಯುವಕ ಸಮಾಧಾನಪಡಿಸಲು ಎಷ್ಟೇ ಪ್ರಯತ್ನ ಪಟ್ಟರೂ ಆತನಿಗೆ ಸಾಧ್ಯವಾಗಲಿಲ್ಲ.
ಪತಿಯನ್ನು ಮತ್ತು ಆ ಯುವತಿಯನ್ನು ರಸ್ತೆಯಲ್ಲಿ ಎಳೆದಾಡಿ, ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ ಮಹಿಳೆ ಆ ಯುವತಿಯನ್ನು ಹಿಡಿದು ನಿಲ್ಲಿಸಿ ತನ್ನ ಕೋಪವನ್ನು ಹೊರ ಹಾಕುತ್ತಿದ್ದರು.ಬಳಿಕ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನೂ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
Follow us on Social media