ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.
ಮಹಾಮಳೆಗೆ ಹೊಸಕೆರೆಹಳ್ಳಿ ಸುತ್ತಮುತ್ತಲೂ ಪ್ರವಾಹದ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ತಮ್ಮ ನೋಟ್ ಪುಸ್ತಕಗಳು ಹಾಗೂ ಪಠ್ಯ ಪುಸ್ತಕಗಳನ್ನು ಕಳೆದುಕೊಂಡಿರುವ ಕುರಿತು ಕೆಲ ಮಾಧ್ಯಮಗಳು ವರದಿ ಪ್ರಸಾರ ಮಾಡಿತ್ತು.
ಈ ವರದಿಯನ್ನು ಗಮನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಆರ್ಥಿಕ ಸಹಾಯ ನೀಡಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾಗೆ ಪುಸ್ಕಕ ಕಳೆದುಕೊಂಡಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಕರೆಸಿಕೊಂಡಿರುವ ಯಡಿಯೂರಪ್ಪ ಅವರು ಪುಸ್ತಕಗಳನ್ನು ವಿತರಿಸಿದ್ದಾರೆ. ನಷ್ಟಕ್ಕೆ ಒಳಗಾದ ಇತರೆ ಕುಟುಂಬಗಳಿಗೂ ಪರಿಹಾರದ ಚೆಕ್’ನ್ನು ಇದೇ ವೇಳೆ ವಿತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಜನಾ, ಸ್ಪಂದನಾ ಹಾಗೂ ರಮೇಶ್ ಎಂಬ ವಿದ್ಯಾರ್ಥಿಗಳಿಗೆ ಪುಸ್ಕತ ವಿತರಿಸಿದ ಯಡಿಯೂರಪ್ಪ ಅವರು ವಿದ್ಯಾಭ್ಯಾಸದತ್ತ ಗಮನ ಹರಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಮುಂದೆ ಎಲ್ಲಾ ರೀತಿಯ ಸಹಾಯ ನೀಡುವ ಭರವಸೆಯನ್ನೂ ನೂಡಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
Follow us on Social media